Surprise Me!

ಸಿ ಎಂ ಸಿದ್ದರಾಮಯ್ಯನವರನ್ನ ಭೇಟಿ ಮಾಡಿದ ನಟ ಸುದೀಪ್ | Oneindia Kannada

2017-12-11 74 Dailymotion

ಕನ್ನಡದ ಸ್ಟಾರ್ ನಟ ಕಿಚ್ಚ ಸುದೀಪ್ ಇಂದು (ಡಿಸೆಂಬರ್ 11) ಬೆಳಿಗ್ಗೆ ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನ ಧಿಡೀರ್ ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ. ಸಿಎಂ ಅವರ ಕಾವೇರಿ ನಿವಾಸದಲ್ಲಿ ಮುಖ್ಯಮಂತ್ರಿಯನ್ನ ಭೇಟಿ ಮಾಡಿದ ಸುದೀಪ್, ಡಾ ವಿಷ್ಣು ವರ್ಧನ್ ಅವರ ಸ್ಮಾರಕ ವಿಚಾರಕ್ಕೆ ಸಂಬಂಧಿಸಿದಂತೆ ಸುಮಾರು 1 ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದಿದ್ದಾರೆ.ಈಗಾಗಲೇ ಮೈಸೂರಿನಲ್ಲಿ ಸರ್ಕಾರ ಗುರುತಿಸಿರುವ ಸ್ಥಳದಲ್ಲಿಯೇ ಡಾ.ವಿಷ್ಣುವರ್ಧನ್ ಅವರ ಸ್ಮಾರಕ ನಿರ್ಮಾಣ ಮಾಡಲಿ. ಆದ್ರೆ, ಅಂತ್ಯ ಸಂಸ್ಕಾರವಾದ ಅಭಿಮಾನ್ ಸ್ಟುಡಿಯೋದಲ್ಲಿ 1 ಎಕೆರೆ ಜಾಗವನ್ನ ಡಾ.ವಿಷ್ಣುವರ್ಧನ್ ಪುಣ್ಯಭೂಮಿ ಎಂದು ಘೋಷಿಸಿ ಎಂದು ಮನವಿ ಮಾಡಿದ್ದಾರೆ.
ಒಂದು ವೇಳೆ ಎರಡು ಕಡೆ ಅಭಿವೃದ್ದಿ ಪಡಿಸಲು ಕಾನೂನಿನಲ್ಲಿ ಅವಕಾಶವಿಲ್ಲವೆಂದ್ರೆ ಒಂದು ಎಕರೆ ಜಾಗವನ್ನ ಮಾತ್ರವನ್ನ ನೀಡಿ, ಆ ಸ್ಥಳವನ್ನ ಅಭಿಮಾನಿಗಳು ಅಭಿವೃದ್ದಿ ಪಡಿಸುತ್ತೇವೆ ಎಂದು ಸುದೀಪ್, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಮುಂದೆ ಕೋರಿಕೆ ಇಟ್ಟಿದ್ದಾರೆ.

Kannada Actor Sudeep met Chief Minister Siddaramaiah at the CM residence.