Surprise Me!

ರಾಹುಲ್ ಗಾಂಧಿ ಸೋತಮೇಲೆ ಎಲ್ಲಿದ್ರು ಗೊತ್ತಾ? | Oneindia Kannada

2017-12-20 149 Dailymotion

New Delhi: Rahul Gandhi takes charge as Congress President, handed over the certificate for taking over. When Congress defeated in Gujarat Assembly Elections, Rahul Gandhi was disappeared. Then where was Rahul Gandhi? Watch Video.

ಕಾಂಗ್ರೆಸ್ ಪಕ್ಷದ ಅಧ್ಯಕ್ಷರಾಗಿ ರಾಹುಲ್ ಗಾಂಧಿಯವರು ನವದೆಹಲಿಯಲ್ಲಿಂದು(ಡಿ.16) ಅಧಿಕಾರ ಸ್ವೀಕರಿಸಿದ್ದಾರೆ. ಇಷ್ಟು ದಿನ ಕಾಂಗ್ರೆಸ್ ಪಕ್ಷವನ್ನು ಮುನ್ನಡೆಸಿದ್ದ ಸೋನಿಯಾ ಗಾಂಧಿಯವರು ತಮ್ಮ ಪುತ್ರ ರಾಹುಲ್ ಗಾಂಧಿಗೆ ಅಧಿಕಾರ ಹಸ್ತಾಂತರಿಸಿದರು.ಕಾಂಗ್ರೆಸ್ ಗಣ್ಯರ ಸಮ್ಮುಖದಲ್ಲಿ ಸುಮಾರು 1 ಗಂಟೆಯ ಕಾಲ ನಡೆದ ಔಪಚಾರಿಕ ಸಮಾರಂಭದಲ್ಲಿ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ಕಾಂಗ್ರೆಸ್ ನ ಹಾಲಿ, ಮಾಜಿ ಮುಖ್ಯಮಂತ್ರಿಗಳು, ಗಣ್ಯರು, ರಾಹುಲ್ ಸಹೋದರಿ ಪ್ರಿಯಾಂಕಾ ಗಾಂಧಿ ವಾದ್ರಾ ಹಾಜರಿದ್ದರು.19 ವರ್ಷಗಳ ಕಾಲ ಕಾಂಗ್ರೆಸ್ ಅನ್ನು ಮುನ್ನಡೆಸಿದ್ದ 70 ವರ್ಷ ವಯಸ್ಸಿನ ಸೋನಿಯಾ ಗಾಂಧಿ, 47 ವರ್ಷದ ತಮ್ಮ ಪುತ್ರ ಮತ್ತು ಇಷ್ಟು ದಿನ ಕಾಂಗ್ರೆಸ್ ಉಪಾಧ್ಯಕ್ಷ ಸ್ಥಾನದಲ್ಲಿದ್ದ ರಾಹುಲ್ ಗಾಂಧಿಯವರಿಗೆ ಪ್ರಮಾಣಪತ್ರ ನೀಡುವ ಮೂಲಕ ಅಧಿಕಾರ ಹಸ್ತಾಂತರಿಸಿದರು.ಇನ್ನು ಇದೀಗ ಗುಜರಾತ್ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಸೋತಾಗ ಅದೇ ಸಮಯದಲ್ಲಿ ರಾಹುಲ್ ಗಾಂಧಿ ನಾಪತ್ತೆಯಾಗಿದ್ರು. ಇನ್ನು ರಾಹುಲ್ ಗಾಂಧಿ ಗುಜರಾತ್ ನಲ್ಲಿ ಇಲ್ಲದೆ ಎಲ್ಲಿ ಹೋಗಿದ್ರು ಗೊತ್ತಾ?