ಟೊಯೊಟಾ ಕಂಪನಿಯು ತನ್ನ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯನ್ನು ಭಾರತೀಯ ಮಾರುಕಟ್ಟೆಯಲ್ಲಿ ಬಿಡುಗಡೆಗೊಳಿಸಿದೆ. ಈ ಹೊಸ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯ ಎಕ್ಸ್ ಶೋರೂಂ ಪ್ರಕಾರ ಆರಂಭಿಕ ಬೆಲೆಯು ರೂ.8.40 ಲಕ್ಷಗಳಾಗಿದೆ.
ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಮಾರುತಿ ಸುಜುಕಿ ವಿಟಾರಾ ಬ್ರೆಝಾ ಮಾದರಿಯ ರಿಬ್ಯಾಡ್ಜ್ ಆವೃತ್ತಿಯಾಗಿದೆ. ಟೊಯೊಟಾ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯು ಮಾರುತಿ ಸುಜುಕಿ ಬ್ರೆಝಾಗಿಂತ ಭಿನ್ನವಾಗಿ ಕಾಣುತ್ತದೆ.
ಹೊಸ ಟೊಯೊಟಾ ಅರ್ಬನ್ ಕ್ರೂಸರ್ ಕಾಂಪ್ಯಾಕ್ಟ್ ಎಸ್‍ಯುವಿಯ ಮುಂಭಾಗದಲ್ಲಿ ಟ್ವಿನ್ ಸ್ಲ್ಯಾಟ್ ಗ್ರಿಲ್ ಅನ್ನು ಹೊಂದಿದೆ.