Surprise Me!

ಚಿಕ್ಕಮಗಳೂರಿನಲ್ಲಿ ಮುಂದಿನ ಐದು ದಿನ ಭಾರಿ ಮಳೆ ಮುನ್ಸೂಚನೆ ; ಆರೆಂಜ್ ಅಲರ್ಟ್​ ಘೋಷಣೆ

2025-07-19 37 Dailymotion

ಚಿಕ್ಕಮಗಳೂರು : ಜಿಲ್ಲೆಯ ಮಲೆನಾಡು ಭಾಗದಲ್ಲಿ ಕಳೆದ ಕೆಲ ದಿನಗಳಿಂದ ಮತ್ತೆ ಮಳೆ ಅಬ್ಬರಿಸುತ್ತಿದೆ. ಎಡಬಿಡದೇ ಸುರಿಯುತ್ತಿರುವ ಧಾರಾಕಾರ ಮಳೆಗೆ ಜನ ಹೈರಾಣಾಗಿದ್ದಾರೆ. ಈ ನಡುವೆ ಜಿಲ್ಲೆಯಲ್ಲಿ ಐದು ದಿನಗಳವರೆಗೆ ಭಾರಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. 

ಮುಂದಿನ ಐದು ದಿನವೂ ಜಿಲ್ಲೆಯಲ್ಲಿ ಆರೆಂಜ್ ಅಲರ್ಟ್​ ಘೋಷಿಸಲಾಗಿದೆ. ಪ್ರವಾಸಿಗರಿಗೆ ಹಾಗೂ ಸ್ಥಳೀಯರಿಗೆ ಎಚ್ಚರಿಕೆಯಿಂದ ಇರುವಂತೆ ಜಿಲ್ಲಾಡಳಿತ ಸೂಚಿಸಿದೆ.

ಜಿಲ್ಲೆಯ ಪ್ರವಾಸಿ ತಾಣಗಳಿಗೆ ವೀಕೆಂಡ್‍ನಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ಪ್ರವಾಸಿಗರು ಆಗಮಿಸುತ್ತಾರೆ. ಹೀಗಾಗಿ, ಪಶ್ಚಿಮಘಟ್ಟದ ಸಾಲಿನಲ್ಲಿ ಚಾರಣ ಮಾಡುವಾಗ ಪ್ರವಾಸಿಗರು ಜಾಗ್ರತೆಯಿಂದ ಇರಬೇಕು. ಗುಡ್ಡ, ಧರೆ ಕುಸಿತದ ಸಂಭವವಿರುವುದರಿಂದ ಸ್ಥಳೀಯರು ಸಹ ಸಾಕಷ್ಟು ಎಚ್ಚರಿಕೆಯಿಂದ ಇರಬೇಕು ಎಂದು ಸೂಚನೆ ನೀಡಿದೆ.

ಕಳೆದ ಕೆಲ ದಿನಗಳ ಹಿಂದೆ ಸುರಿದ ಧಾರಾಕಾರ ಮಳೆಗೆ ಜಿಲ್ಲೆಯ ವಿವಿಧ ಭಾಗದಲ್ಲಿ ಹಲವಾರು ಅವಘಡಗಳು ಸಂಭವಿಸಿತ್ತು. ಇದರ ಮುನ್ನೆಚ್ಚರಿಕೆ ಕ್ರಮವಾಗಿ ಈಗ ಜಿಲ್ಲಾಡಳಿತ ಈ ಕ್ರಮಗಳನ್ನು ತೆಗೆದುಕೊಂಡಿದೆ. ಸೂಕ್ಷ್ಮ ಹಾಗೂ ಅತಿ ಸೂಕ್ಷ್ಮ ಪ್ರದೇಶದಲ್ಲಿ ಜಿಲ್ಲಾಡಳಿತ ಹಾಗೂ ತಾಲೂಕು ಆಡಳಿತದ ವತಿಯಿಂದ ಎಚ್ಚರಿಕೆ ಕ್ರಮವನ್ನು ವಹಿಸಲಾಗಿದೆ.

ಇದನ್ನೂ ಓದಿ : ರಾಜ್ಯದಲ್ಲಿ ಮುಂಗಾರು ಮತ್ತಷ್ಟು ಚುರುಕು: ಕೊಡಗಿಗೆ ರೆಡ್, 5 ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಣೆ - KARNATAKA RAIN FORECAST