Surprise Me!

ಕೆಆರ್‌ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಸಚಿವರ ಈ ಹೇಳಿಕೆ ಬಗ್ಗೆ ಮಂತ್ರಾಲಯದ ಸ್ವಾಮೀಜಿ ಪ್ರತಿಕ್ರಿಯೆ

2025-08-04 16 Dailymotion

ರಾಯಚೂರು: ಮೈಸೂರಿನ ಕೆಆರ್​ಎಸ್​ ಜಲಾಶಯ ನಿರ್ಮಾಣಕ್ಕೆ ಮೈಸೂರು ಸಂಸ್ಥಾನದ ರಾಜಮಾತೆಯವರು ತಮ್ಮ ಆಭರಣಗಳನ್ನು ಮಾರಾಟ ಮಾಡಿ ಅಣೆಕಟ್ಟು ನಿರ್ಮಾಣಕ್ಕೆ ಸಹಕರಿಸಿದ್ದಾರೆ ಎಂದು ಮಂತ್ರಾಲಯದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥ ಸ್ವಾಮೀಜಿ ಹೇಳಿದರು.

"ಕೆಆರ್‌ಎಸ್ ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್" ಎಂದಿರುವ ಸಚಿವ ಹೆಚ್.ಸಿ. ಮಹದೇವಪ್ಪ ಹೇಳಿಕೆ ಕುರಿತು ರಾಯಚೂರು ಸಮೀಪದ ಮಂತ್ರಾಲಯದ ಮಠದಲ್ಲಿಂದು ಸುದ್ದಿಗಾರರ ಜೊತೆ ಮಾತನಾಡಿದ ಅವರು, ಕೆಆರ್‌ಎಸ್ (ಕೃಷ್ಣರಾಜಸಾಗರ) ಜಲಾಶಯವನ್ನು ಮೈಸೂರು ಸಂಸ್ಥಾನದ ರಾಜಮಾತೆಯವರು ತಮ್ಮ ತಮ್ಮ ಆಭರಣಗಳನ್ನು ಮಾರಾಟ ಮಾಡಿ, ಕರ್ನಾಟಕದ ಕಾವೇರಿ ಪ್ರಾಂತ್ಯದ ಜನರಿಗೆ ಉತ್ತಮವಾದ ಕುಡಿವ ನೀರಿನ ವ್ಯವಸ್ಥೆ ಮಾಡಿದ್ದಾರೆ. ಅದು ಅವರ ತ್ಯಾಗದ ಸಂಕೇತ. ರಾಜ ಮನೆತನದ ತ್ಯಾಗದ ಫಲವಾಗಿ ಕೆಆರ್‌ಎಸ್ ನಿರ್ಮಾಣವಾಗಿದೆ. ಆದರೆ, ಬೇರೆ ಬೇರೆಯರು ಇದನ್ನು ನಿರ್ಮಾಣ ಮಾಡಿದ್ದಾರೆ ಅನ್ನೋದನ್ನು ಇತಿಹಾಸ ತಜ್ಞರು ಹೇಳಬೇಕೇ ಹೊರತು ನಾವು ಅದರ ಬಗ್ಗೆ ಹೆಚ್ಚಿನ ಮಾಹಿತಿ ಹೇಳಲು ಸಾಧ್ಯವಿಲ್ಲ ಎಂದು ತಿಳಿಸಿದರು. 

ವಿವಿಧ ಬೇಡಿಕೆಗಳ ಈಡೇರಿಸುವಂತೆ ಆಗ್ರಹಿಸಿ ಆಗಸ್ಟ್‌ 5 ರಿಂದ ರಾಜ್ಯಾದ್ಯಂತ ಸಾರಿಗೆ ನೌಕರರು ಮುಷ್ಕರ ಹಮ್ಮಿಕೊಂಡಿದ್ದು, ಈ ಬಗ್ಗೆ ಪ್ರತಿಕ್ರಿಯೆ ನೀಡಿದ ಅವರು, ಸಾರಿಗೆ ಇಲಾಖೆ ಸಿಬ್ಬಂದಿ ತಮ್ಮ ಬೇಡಿಕೆಗಳನ್ನು ಪಡೆಯೋದಕ್ಕೆ ಅನೇಕ ಬಾರಿ ರಾಜ್ಯ ಸರ್ಕಾರಕ್ಕೆ ಅಹವಾಲು ಸಲ್ಲಿಸಿದ್ದಾರೆ. ರಾಜ್ಯ ಸರ್ಕಾರ ಆ ಅಹವಾಲು ಪರಿಶೀಲಿಸಿ ಸೂಕ್ತ ಕ್ರಮಕೈಗೊಂಡು ಅವರಿಗೆ ಪರಿಹಾರ ಒದಗಿಸುತ್ತದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. 

ಇದನ್ನೂ ಓದಿ: KRS ಡ್ಯಾಂಗೆ ಮೊದಲು ಅಡಿಗಲ್ಲು ಹಾಕಿದ್ದು ಟಿಪ್ಪು ಸುಲ್ತಾನ್: ಸಚಿವ ಮಹದೇವಪ್ಪ - MINISTER H C MAHADEVAPPA

ಶ್ರೀರಂಗಪಟ್ಟಣದಲ್ಲಿ ಭಾನುವಾರ ನಡೆದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಸಚಿವ ಹೆಚ್.ಸಿ. ಮಹದೇವಪ್ಪ, "ಕನ್ನಂಬಾಡಿ ಕಟ್ಟೋದಕ್ಕೆ ಟಿಪ್ಪು ಸುಲ್ತಾನ್ ಅಡಿಗಲ್ಲು ಹಾಕಿದರು. ಆದರೆ, ಈಗ ಅದನ್ನು ಹೇಳೋಕೆ ಯಾರಿಗೂ ಧೈರ್ಯ ಇಲ್ಲ. ಕೆಆರ್‌ಎಸ್ ಗೇಟ್ ಹೆಬ್ಬಾಗಿಲಿನಲ್ಲಿ ಈಗಲೂ ಅದನ್ನು ಕಾಣಬಹುದು. ಭಾರತಕ್ಕೆ ಸಿರಿಕಲ್ಚರ್ ರೇಷ್ಮೆ ತಂದಿದ್ದು ಕೂಡ ಟಿಪ್ಪು ಸುಲ್ತಾನ್. ರಣರಂಗದಲ್ಲಿ ಬ್ರಿಟಿಷರ ವಿರುದ್ಧ ಹೋರಾಟ ಮಾಡಿದ ದೊಡ್ಡ ಸ್ವಾತಂತ್ರ್ಯ ಸೇನಾನಿ ಎಂದು ಐತಿಹಾಸಿಕ ಹಲವು ವಿಚಾರಗಳ ಬಗ್ಗೆ ಪ್ರಸ್ತಾಪಿಸಿ ಹೇಳಿಕೆ ನೀಡಿದ್ದಾರೆ.